ಶಿವಮೊಗ್ಗ: ತೋಟಗಾರಿಕೆ ವಿವಿ ಸಹ ಸಂಶೋಧನಾ ನಿರ್ದೇಶಕರ ಮನೆಯಲ್ಲಿ 6.34 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಶಿವಮೊಗ್ಗ: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಾವಯವ ಕೃಷಿ ವಿಭಾಗದ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್. ಪ್ರದೀಪ್ ಅವರ ಆರು ಆಸ್ತಿಗಳ ಮೇಲೆ ದಾಳಿ ನಡೆಸಿದ್ದು, ಒಟ್ಟು 6.34 ಕೋಟಿ ರೂ. ಮೌಲ್ಯದ ಚರ, ಸ್ಥಿರಾಸ್ತಿ ಪತ್ತೆ ಹಚ್ಚಲಾಗಿದೆ.
ಪ್ರಿಯಾಂಕ ಲೇಔಟ್‌ನಲ್ಲಿರುವ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸನಗರದಲ್ಲಿ ಸೇರಿ ಆರು ಕಡೆ ದಾಳಿ ನಡೆಸಿದರು. ದಾಳಿಯಲ್ಲಿ 4.45 ಕೋಟಿ ಮೌಲ್ಯದ 5 ನಿವೇಶನ, 1 ಮನೆ, 16.7 ಎಕರೆ ತೋಟ, 10 ಸಾವಿರ ನಗದು, 34.75 ಲಕ್ಷ ಮೌಲ್ಯದ ಚಿನ್ನಾಭರಣ, 30 ಲಕ್ಷ ಮೌಲ್ಯದ ಕಾರು ಹಾಗೂ ಬೈಕ್, 25 ಸಾವಿರ ಮೌಲ್ಯದ ವಿದೇಶಿ ನಗದು, 15.50 ಲಕ್ಷ ಮೌಲ್ಯದ ಕುರಿ ಹಾಗೂ ಹಸು, 50 ಲಕ್ಷ ಮೌಲ್ಯದ ಫಾರ್ಮ್ ಹೌಸ್, 29.75 ಲಕ್ಷ ರೂ. ಬ್ಯಾಂಕ್ ಬ್ಯಾಲೆನ್ಸ್, 28.75 ಲಕ್ಷ ಮೌಲ್ಯದ ಗೃಹಪಯೋಗಿ ವಸ್ತುಗಳು ಪತ್ತೆಯಾಗಿವೆ.
ಒಟ್ಟು 6.34 ಕೋಟಿ ರೂ. ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ದಾಳಿಯಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಲೋಕಾಯುಕ್ತ ಅಧಿಕಾರಿಗಳು ಪಾಲ್ಗೊಂಡಿದ್ದರು.