×
Ad

ಶಿವಮೊಗ್ಗ | ಮತ್ತು ಭರಿಸುವ ಔಷಧ ನೀಡಿ ಬಾಲಕಿಯ ಅತ್ಯಾಚಾರ: ಇಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

Update: 2023-08-22 13:58 IST

ಶಿವಮೊಗ್ಗ, ಆ.22: ಬಾಲಕಿಗೆ ಮತ್ತು ಭರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ಪೊಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಾಗರದ ಅಜಯ್(32) ಹಾಗೂ ಶಾಬಾಸ್ (26) ಎನ್ನುವರ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿದೆ.

ಪರಿಚಿತ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದಿದ್ದ ಆರೋಪಿಗಳು ಆಕೆಗೆ ಮತ್ತು ಭರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News