×
Ad

ಸಾಗರ | ಮೇವು ತರಲು ಹೋಗಿದ್ದ ವೇಳೆ ಹಾವು ಕಡಿದು ಬಾಣಂತಿ ಮೃತ್ಯು

Update: 2024-08-09 17:35 IST

ರಂಜಿತಾ (22)

ಸಾಗರ : ಮೇವು ತರಲು ಹೋಗಿದ್ದ ವೇಳೆ ಹಾವು ಕಡಿದು ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಮೃತ ಮಹಿಳೆಯನ್ನು ರಂಜಿತಾ (22) ಎಂದು ಗುರುತಿಸಲಾಗಿದೆ. ಮೇವು ತರಲು ಹೋಗಿದ್ದ ವೇಳೆ ಪೊದೆಯಲ್ಲಿದ್ದ ಹಾವೊಂದು ಮಹಿಳೆಗೆ ಕಡಿದಿದೆ ಎನ್ನಲಾಗಿದೆ. ಕೆಲಹೊತ್ತಿನ ಬಳಿಕ ಹಾವು ಕಚ್ಚಿರುವುದು ಅವರ ಅರಿವಿಗೆ ಬಂದಿದೆ. ಕುಟುಂಬಸ್ಥರು ನೋಡಿದಾಗ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದಳು. ಇದನ್ನು ಗಮನಿಸಿ ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಮಹಿಳೆಗೆ ಮೂರು ವರ್ಷದ ಹೆಣ್ಣು ಹಾಗೂ 4 ತಿಂಗಳ ಗಂಡು ಮಗು ಇದೆ. ಆಸ್ಪತ್ರೆಯ ಶವಾಗಾರದ ಬಳಿ ಮೃತ ರಂಜಿತಾ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News