ಸಾಗರ : ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಎಂಬ ಕಾರಣಕ್ಕೆ ತುಮರಿ ಗ್ರಾಪಂ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯ ಮೂವರು ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಎರಡು, ಮೂರು ಮತ್ತು ನಾಲ್ಕನೇ ತರಗತಿಯ ಮಕ್ಕಳಿಗೆ ಶಿಕ್ಷಕಿ ರಕ್ಷಿತಾ ಕೋಲಿನಿಂದ ಹೊಡೆದಿದ್ದು, ಮಕ್ಕಳ ಬೆನ್ನಿನಲ್ಲಿ ಗಾಯಗಳಾಗಿವೆ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನೆಗೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಮೇಲೆ ಹಲ್ಲೆ ನಡೆಸಿದ ಅತಿಥಿ ಶಿಕ್ಷಕಿ ವಿರುದ್ಧ ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor