Sagara | ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು
ಸಾಂದರ್ಭಿಕ ಚಿತ್ರ | PC : Gemini AI
ಸಾಗರ : ತಾಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆ ಬಳಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.
ಮೃತರನ್ನು ಮುಳುಕೇರಿ ಗ್ರಾಮದ ಷಣ್ಮುಖ ಅವರ ಪುತ್ರ ಲೇಖನ್ (13) ಹಾಗೂ ಆಲಳ್ಳಿ ಗ್ರಾಮದ ಗಣೇಶ್ ಅವರ ಪುತ್ರ ಪುನೀತ್ (11) ಎಂದು ಗುರುತಿಸಲಾಗಿದೆ.
ಈಜಲು ತೆರಳಿದ್ದ ಸಂದರ್ಭದಲ್ಲಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.