ಸಾಗರ ಜಿಲ್ಲಾ ಕೇಂದ್ರಕ್ಕೆ ಆಗ್ರಹ : ವಿವಿಧ ಸಂಘಟನೆಗಳಿಂದ ಸಾಗರ ಬಂದ್
Update: 2025-12-17 09:33 IST
ಸಾಗರ : ಸಾಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಇಂದು(ಡಿ.17) ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಬಂದ್‌ಗೆ ಕರೆ ನೀಡಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಸಾಗರ ಪಟ್ಟಣದ ಹಲವೆಡೆ ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ಬೆಳಿಗ್ಗೆಯೇ ಕೋರ್ಟ್ ಸಮೀಪ, ಐತಪ್ಪ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳ ನಡು ರಸ್ತೆಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಸಾಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಬಂದ್‌ಗೆ ಕರೆ ನೀಡಲಾಗಿದ್ದು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.