ಸಾಗರ : ಕೆಎಸ್ಸಾರ್ಟಿಸಿ ಬಸ್- ಕಂಟೈನರ್ ಲಾರಿ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ, ಇಬ್ಬರು ಗಂಭೀರ
ಸಾಗರ : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಂಟೈನರ್ ಲಾರಿ ಗುರುವಾರ ಮುಖಾಮುಖಿ ಢಿಕ್ಕಿಯಾಗಿ ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ನಡೆದಿದೆ.
ಸಾಗರದಿಂದ ಶಿವಮೊಗ್ಗದ ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಕಂಟೈನರ್ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಸಾಗರದಿಂದ ಶಿವಮೊಗ್ಗ ಕಾಲೇಜಿಗೆ ತೆರಳುವಂತಹ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಲ್ಲರೂ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ.
ಮರ್ಕಝ್ ಶಾಲಾ ಬಸ್ ನ ಚಾಲಕ ಝಿಯಾವುಲ್ಲಾ ಗಾಯಳುಗಳನ್ನು ಆನಂದಪುರ ಆಸ್ಪತ್ರೆಗೆ ಶಾಲಾ ಬಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದಾರೆ.
ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿದ್ದು ಪೊಲೀಸರು ಸಂಚಾರ ತೆರವುಗೊಳಿಸಿದರು.