×
Ad

ಶಿಕಾರಿಪುರ | ಸಿದ್ದರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Update: 2024-09-26 12:27 IST

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿದರು. ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Delete Edit

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News