×
Ad

ಶಿವಮೊಗ್ಗ: ಮಂಗನ ಕಾಯಿಲೆಗೆ 18 ವರ್ಷದ ಯುವತಿ ಬಲಿ

Update: 2024-01-08 13:26 IST

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗ್ಗೆ ಯುವತಿ ಸಾವನ್ನಪ್ಪಿದ್ದಾಳೆ.

ಈವರೆಗೆ ಮೂರು ಮಂದಿಗೆ ಪಾಸಿಟಿವ್ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News