×
Ad

ಶಿವಮೊಗ್ಗ | ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ : ಆರೋಪಿ ಸರೆ

Update: 2024-07-07 12:46 IST

 ಪೂಜಾ ಎ.ಕೆ. (24)

ಶಿವಮೊಗ್ಗ: ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಮೃತ ಯುವತಿಯನ್ನು ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದ್ದು, ಹತ್ಯೆಆರೋಪಿಯಾದ ಮಣಿ ಎಂಬವರನ್ನು ಬಂಧಿಸಲಾಗಿದೆ.

ಜೂ.30 ರಂದು ಪೂಜಾ ನಾಪತ್ತೆಯಾಗಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ. ನಾಲೂರು ಸಮೀಪದ ಮಣಿ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿ, ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಶನಿವಾರ ರಾತ್ರಿ ಆರೋಪಿ ಮಣಿಯನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News