×
Ad

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯ ಅಬ್ಬರ | ಜು.19ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-18 22:47 IST

ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಜು.19ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜು.19ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News