ಶಿವಮೊಗ್ಗ | ಮಾರಕಾಸ್ತ್ರಗಳಿಂದ ಹಲ್ಲೆ: ವ್ಯಕ್ತಿ ಗಂಭೀರ
Update: 2025-10-02 21:30 IST
ಶಿವಮೊಗ್ಗ, ಅ.2: ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಆರ್.ಎಂ.ಎಲ್. ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ.
ಬುದ್ಧ ನಗರದ ಮಾರ್ನಮಿಬೈಲು ನಿವಾಸಿ ಅಮ್ಜದ್ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಆರ್.ಎಂ.ಎಲ್. ನಗರದ ಭಾರತ್ ಫೌಂಡ್ರಿ ಹಿಂಭಾಗದಲ್ಲಿ ಶಾಹಿದ್ ಎಂಬವರ ಜೊತೆ ಅಮ್ಜದ್ ನಿಂತಿದ್ದಾಗ ದುಷ್ಕರ್ಮಿಗಳು ಕೈ ಬೆರಳು ಸೇರಿದಂತೆ ದೇಹದ ವಿವಿಧ ಭಾಗಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಹಲ್ಲೆಯಿಂದ ಅಮ್ಜದ್‌ನ ಸ್ಥಿತಿ ಗಂಭೀರವಾಗಿದ್ದು, ಶಾಹಿದ್‌ಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.