×
Ad

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ : ಇಬ್ಬರ ಬಂಧನ

Update: 2024-10-28 16:53 IST

ಗಾಂಜಾ ಮಾರಾಟ ಆರೋಪ : ಇಬ್ಬರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 2.80 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಂಡಿದ್ದಾರೆ.

ಅಗರದಳ್ಳಿ ಕ್ಯಾಂಪ್‌ನ ಸಂಜೀವ್ ರಾಜು (40) ಮತ್ತು ಭದ್ರಾವತಿ ಸಿದ್ದರ ಕಾಲೋನಿಯ ಗುರುಪ್ರಸಾದ್ (24) ಬಂಧಿತ ಆರೋಪಿಗಳು.

ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್‌ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ ಪೊಲೀಸರು ದಾಳಿ ಮಾಡಿದ್ದು,  2.80 ಲಕ್ಷ ರೂ. ಮೌಲ್ಯದ 5.5 ಕೆ.ಜಿ ಒಣ ಗಾಂಜಾ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ಸಂಗ್ರಹಿಸಿಟ್ಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News