×
Ad

ಶಿವಮೊಗ್ಗ: ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧನ

Update: 2024-03-25 11:06 IST

ಶಿವಮೊಗ್ಗ, ಮಾ.25: ಪೊಲೀಸರ ಮೇಲೆಗೆ ದಾಳಿಗೆ ಯತ್ನಿಸಿದ ರೌಡಿಶೀಟರ್ ಒಬ್ಬನನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಸೋಮವಾರ ಬೆಳಗ್ಗೆ ಶಿವಮೊಗ್ಗ ನಗರ ಹೊರವಲಯದ ಮಲ್ಲಿಗೇನಹಳ್ಳಿ ಬಳಿಯ ಹಿಂದೂ ರುದ್ರಭೂಮಿ ಬಳಿ ನಡೆದಿದೆ.

ರೌಡಿ ಶೀಟರ್ ಫರ್ವೇಝ್ ಅಲಿಯಾಸ್ ಫರ್ರು ಬಂಧಿತ ಆರೋಪಿ.

ಪ್ರಕರಣವೊಂದರ ಪ್ರಮುಖ ಆರೋಪಿಯಾಗಿದ್ದ ಫರ್ವೇಝ್ ನ ಬಂಧನಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ತೆರಳಿದ್ದರು. ಈ ವೇಳೆ ಫರ್ವೇಝ್ ಡ್ರಾಗರ್ ನಿಂದ ಪೊಲೀಸ್ ಸಿಬ್ಬಂದಿ ನಾಗಪ್ಪ ಎಂಬವರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ.

ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸತ್ಯನಾರಾಯಣ ಎಚ್ಚರಿಕೆ ನೀಡಿದರೂ ಲೆಕ್ಕಿಸದೆ ನಾಗಪ್ಪರ ದಾಳಿ ಮಾಡಿದ್ದಾನೆ. ಈ ವೇಳೆ ಫರ್ವೇಝ್ ಕಾಲಿಗೆ ಇನ್ ಸ್ಪೆಕ್ಟರ್ ಸತ್ಯನಾರಾಯಣ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಗೊಂಡಿರುವ ರೌಡಿಶೀಟರ್ ಪಫರ್ವೇಝ್ ನನ್ನು ಹಾಗೂ ಪೊಲೀಸ್ ಸಿಬ್ಬಂದಿ ನಾಗಪ್ಪರನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News