×
Ad

ಶಿವಮೊಗ್ಗ: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

Update: 2025-01-12 11:53 IST

ಘಟನೆ ನಡೆದ ಮನೆಯ ಹೊರಗೆ ಸ್ಥಳೀಯರು ನೆರೆದಿರುವುದು

ಶಿವಮೊಗ್ಗ: ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ.

ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News