×
Ad

ಶಿವಮೊಗ್ಗ: ಕಾಲು ಜಾರಿ ಹಳ್ಳಕ್ಕೆ ಬಿದ್ದು ರೈತ ಮೃತ್ಯು

Update: 2024-07-31 14:48 IST

ಶಿವಮೊಗ್ಗ: ಹಳ್ಳ ದಾಟುವಾಗ ರೈತರೊಬ್ಬರು  ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ  ಘಟನೆ ತೀರ್ಥಹಳ್ಳಿ ತಾಲೂಕಿನ ದೇವಂಗಿಯ ಉಂಟೂರು ಗ್ರಾಮದಲ್ಲಿ ನಡೆದಿರುವ ಬಗ್ಗೆ ಬುಧವಾರ ವರದಿಯಾಗಿದೆ.

ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾದ ಹಿನ್ನಲೆಯಲ್ಲಿ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿತ್ತು. ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿದ್ದು,  ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.

ಕೃಷ್ಣಮೂರ್ತಿ ನಾಯ್ಕ್ ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.

ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News