×
Ad

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Update: 2026-02-03 13:49 IST

ಶಿವಮೊಗ್ಗ: ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ  ಮಂಗಳವಾರ ನಡೆದಿದೆ.

ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಅಚಾನಕ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ  ಡಾ. ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಸ್ತುತ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತಂಕಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News