ಶಿವಮೊಗ್ಗ | ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಾಯ
Update: 2025-07-23 20:43 IST
ಶಿವಮೊಗ್ಗ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ಶರಾವತಿ ನಗರದ 1ನೇ ಅಡ್ಡರಸ್ತೆಯಲ್ಲಿ ನಡೆದಿದೆ. ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿದೆ.
ಶರಾವತಿ ನಗರದ 1ನೇ ಅಡ್ಡರಸ್ತೆಯ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವವರ ಮನೆಯಲ್ಲಿ ಬುಧವಾರ ಸಂಜೆ ಸಿಲಿಂಡರ್ ಸ್ಪೋಟಗೊಂಡಿದೆ.
ಮನೆಯಲ್ಲಿದ್ದ ಎಂ.ಬಿ.ಪೀರಾನ್ ಸಾಬ್, ಅವರ ಪತ್ನಿ ಸಾಹೇರಾ, ಸೊಸೆ ಜಯೇಬಾ ಗಾಯಗೊಂಡಿದ್ದಾರೆ. ಕೂಡಲೇ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಒಳಗಿದ್ದ ವಸ್ತುಗಳಿಗೆ ಹಾನಿಯಾಗಿದೆ. ಸ್ಪೋಟದ ಶಬ್ದಕ್ಕೆ ನೆರೆಹೊರೆಯ ಮನೆಯವರು ಆತಂಕಕ್ಕೆ ಒಳಗಾಗಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.