×
Ad

ಶಿವಮೊಗ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Update: 2024-01-30 12:50 IST

ಶಿವಮೊಗ್ಗ, ಜ.30: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸವಾನಿ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ಎಂದು ಗುರುತಿಸಲಾಗಿದೆ.

ಪ್ರೀತಿ ಕಳೆದ 15 ದಿನಗಳಿಂದ ಶಾಲೆಗೆ ಗೈರುಹಾಜರಾಗಿದ್ದಳೆನ್ನಲಾಗಿದೆ. ಈ ಮಾಹಿತಿ ಅರಿತ ಪೋಷಕರು ಆಕೆಯನ್ನು ಪ್ರಶ್ನಿಸಿದ್ದರು. ಇದೇ ಕಾರಣಕ್ಕೆ ಪ್ರೀತಿ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News