×
Ad

ಶಿವಮೊಗ್ಗ: ಮತ್ತೆ ಮಂಗನ ಕಾಯಿಲೆ ಪತ್ತೆ

Update: 2023-12-15 10:35 IST

ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಡಿ.15: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ (ಕೆಎಫ್ಡಿ) ಪ್ರಕರಣ ಪತ್ತೆಯಾಗಿದೆ.

ತೀರ್ಥಹಳ್ಳಿ ತಾಲೂಕಿನ ಶೇಡ್ಗಾರ್ ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಯೊಬ್ಬರ ಆರ್.ಟಿ.ಸಿ.ಪಿ.ಆರ್. ಟೆಸ್ಟ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ತಾಲೂಕಿನ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈ ಭಾಗದಲ್ಲಿ ಕೆಎಫ್ಡಿ ಪ್ರಕರಣಗಳು ಕಂಡುಬಂದಿವೆ.

ಕೆಲ ದಿನಗಳ ಹಿಂದೆ ಕೊಪ್ಪ ತಾಲೂಕಿನ ಗುಣವಂತೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಮೊದಲನೆ ಟೆಸ್ಟ್ ನನಲ್ಲಿ ನೆಗೆಟಿವ್, ಎರಡನೇ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದ್ದರಿಂದ ಅದನ್ನು ಆರೋಗ್ಯ ಇಲಾಖೆ ಪರಿಗಣಿಸಿರಲಿಲ್ಲ. ಅತ್ತಿಸರದಲ್ಲಿ ಪಾಸಿಟಿವ್ ಬಂದಿದ್ದು ಆರೋಗ್ಯ ಇಲಾಖೆ ಕಾಡಂಚಿನ ಗ್ರಾಮದ ಜನರಲ್ಲಿ ಜಾಗೃತಿಗೆ ಮುಂದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News