×
Ad

ಶಿವಮೊಗ್ಗ: ಬಗನಕಟ್ಟೆ ಗ್ರಾಪಂ ಪಿಡಿಒ ಲೋಕಾಯುಕ್ತ ಬಲೆಗೆ

Update: 2023-11-17 11:35 IST

ಶಿವಮೊಗ್ಗ, ನ.17: ಲಂಚ ಪಡೆಯುತ್ತಿದ್ದ ವೇಳೆ ಬಗನಕಟ್ಟೆ ಗ್ರಾಮ ಪಂಚಾಯತ್ ಪಿಡಿಒ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಶಿಕಾರಿಪುರ ತಾಲೂಕಿನ ಸಂಕ್ಲಾಪುರ ನಿವಾಸಿ ಸಾಕಮ್ಮ ಎಂಬವರ ಮನೆಯ ಛಾವಣಿ ಮತ್ತು ಗೋಡೆ 2021ರಲ್ಲಿ ಮಳೆಯಿಂದ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಜಿಪಿಎಸ್ ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು ಬಗನಕಟ್ಟೆ ಗ್ರಾಮ ಪಂಚಾಯತ್ ಪಿಡಿಒ ಮಂಜುನಾಥ್ ಅವರು ಸಾಕಮ್ಮರಿಂದ 20,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಈ ಮೊತ್ತದಲ್ಲಿ 13,000 ರೂ. ಈಗಾಗಲೇ ಪಡೆದಿದ್ದರು. ಬಾಕಿ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪಿಡಿಒ ವಿರುದ್ಧ ಸಾಕಮ್ಮಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಉಮೇಶ್, ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಸುರೇಶ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News