×
Ad

ಶಿವಮೊಗ್ಗ: ಶಾಲೆಯಿಂದ ತಪ್ಪಿಸಿಕೊಂಡ ನಾಲ್ಕು ಮಕ್ಕಳ ರಕ್ಷಣೆ

Update: 2024-11-14 10:56 IST

ಸಾಂದರ್ಭಿಕ ಚಿತ್ರ indiarailinfo.com

ಶಿವಮೊಗ್ಗ: ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು ಅವರನ್ನು ಆರ್.ಪಿ.ಎಫ್. ಪೊಲೀಸರು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ.

ನಗರದ ಗಾಡಿಕೊಪ್ಪದ ಸರಕಾರಿ ಶಾಲೆಯಲ್ಲಿ ಒಂದು, ಮೂರು ಮತ್ತು ಏಳನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ಕಾಮಾಕ್ಷಿಪುರದ ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಕುಳಿತಿದ್ದರು. ಇದನ್ನು ಗಮನಿಸಿದ ಆರ್.ಪಿ.ಎಫ್ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ತಮಗೆ ಶಾಲೆಗೆ ಹೋಗಲು ಇಷ್ಟವಿಲ್ಲ, ಕೆಲಸ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News