×
Ad

ಶಿವಮೊಗ್ಗ | ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ: ಪೊಕ್ಸೊ ಪ್ರಕರಣ ದಾಖಲು

Update: 2023-09-08 09:38 IST

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದದಲ್ಲಿ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಯಾರೂ ಇಲ್ಲದ ವೇಳೆ ಬಾಲಕಿಯ ಮನೆ ಬಳಿ ತೆರಳಿದ್ದ ಅದೇ ಗ್ರಾಮದ ಯುವಕ ಕುಡಿಯಲು ನೀರು ಕೇಳಿದ್ದಾನೆ. ಬಾಲಕಿ ನೀರು ತರಲು ಒಳಗೆ ಹೋದಾಗ ಹಿಂಬಾಲಿಸಿಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಕೂಗಿಕೊಂಡಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ಗ್ರಾಮಸ್ಥರು ಡಿವೈಎಸ್ಪಿ ಕಚೇರಿಗೆ ತೆರಳಿ ತಕ್ಷಣ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News