×
Ad

Shivamogga | ತೀರ್ಥಹಳ್ಳಿಯಲ್ಲಿ ಟ್ಯಾಂಕರ್ - ಬೈಕ್ ಮಧ್ಯೆ ಅಪಘಾತ: ಓರ್ವ ಮೃತ್ಯು

Update: 2025-11-15 12:17 IST

ಶಿವಮೊಗ್ಗ: ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ.

ಹನುಮಂತಪ್ಪ (59) ಮೃತಪಟ್ಟ ಬೈಕ್ ಸವಾರ.

ಹನುಮಂತಪ್ಪ ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಬೆಜ್ಜವಳ್ಳಿ ಸಮೀಪ ಬೈಕೊನಲ್ಲಿ ರಸ್ತೆಯನ್ನು ದಾಟುತ್ತಿದ್ದಾಗ ಏಕಾಏಕಿ ಎದುರಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಹನಮಂತಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News