ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿ ಆಯ್ಕೆ

Update: 2026-08-22 14:00 IST

ಶಿವಮೊಗ್ಗ : ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಕಟಿಸಿರುವ ಪ್ರಸಕ್ತ ವರ್ಷದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರತ್ನ ಕುಮಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೆ. 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ. 

ತಾಲ್ಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರತ್ನಕುಮಾರಿ ಅವರಿಗೆ ಈ ವರ್ಷದ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ ಒಲಿದುಬಂದಿರುವುದು ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆ ಎನಿಸಿದೆ.

ಸೆ. 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಪ್ರಮಾಣಪತ್ರ, 50 ಸಾವಿರ ರೂ. ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ.

ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ರತ್ನಕುಮಾರಿ ಅವರಿಗೆ ಅಭಿನಂದನೆಗಳು. ನಮ್ಮ ಇಲಾಖೆ, ರಾಜ್ಯ ಮತ್ತು ನಮ್ಮ ಜಿಲ್ಲೆ ಹೆಮ್ಮೆಪಡುವಂತೆ ಮಾಡಿದ್ದಾರೆ. ನಿಮ್ಮ ಕೆಲಸ ರಾಜ್ಯದ ಶಿಕ್ಷಕ ಸಮುದಾಯಕ್ಕೆಲ್ಲಾ ಮಾದರಿ. ನಿಮ್ಮ ಪವಿತ್ರವಾದ ಈ ಶೈಕ್ಷಣಿಕ ಕಾಯಕ ಹೀಗೆಯೇ ಮುಂದುವರೆಯಲಿ.

-ಮಧು ಬಂಗಾರಪ್ಪ, ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News