×
Ad

ಶಿವಮೊಗ್ಗ | ಹಳ್ಳ ದಾಟುವಾಗ ಬೈಕ್ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Update: 2024-10-12 14:41 IST

ಶಿವಮೊಗ್ಗ : ಹಳ್ಳ ದಾಟುವಾಗ ಬೈಕ್ ಸಹಿತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೊಚ್ಚಿ ಹೋದ ಸ್ಥಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಮೃತದೇಹ ಸಿಕ್ಕಿದೆ.

ಯಡವಾಲದ ಕೊಂಡಜ್ಜಿ ಹಳ್ಳದ ಸೇತುವೆಯನ್ನು ದಾಟುವಾಗ ಚಿನ್ನಿಕಟ್ಟೆಯ ಇಕ್ಬಾಲ್ (40) ಎಂಬುವವರು ತಮ್ಮ ಬೈಕ್ ಸಹಿತ ಕೊಚ್ಚಿ ಹೋಗಿದ್ದರು. ಭಾರಿ ಮಳೆಯಿಂದಾಗಿ ಸೇತುವೆ ಮೇಲ್ಭಾಗದಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಈ ಸಂದರ್ಭ ಆಯಾತಪ್ಪಿ ಇಕ್ಬಾಲ್ ಕೊಚ್ಚಿ ಹೋಗಿದ್ದರು. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು.

ಕೊಂಡಜ್ಜಿ ಹಳ್ಳದಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ಇಕ್ಬಾಲ್ ಅವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News