×
Ad

ಶಿವಮೊಗ್ಗ | ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ್ದು ಶಾಲಾ ಬಾಲಕ!

Update: 2025-08-03 22:56 IST

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆಯ ಸರಕಾರಿ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣ ಸಂಬಂಧ ಮಹತ್ವದ ಮಾಹಿತಿ ಪೊಲೀಸರ ತನಿಖೆಯಿಂದ ಬಹಿರಂಗಗೊಂಡಿದೆ. ಶಾಲಾ ಬಾಲಕ ಹುಡುಗಾಟಿಕೆಯಿಂದ‌ ನೀರಿನ ತೊಟ್ಟಿಗೆ ವಿಷ ಬೆರೆಸಿದ್ದಾಗಿ ತನಿಖೆಯಿಂದ ತಿಳಿದುಬಂದಿದೆ.

ಹೊಸನಗರ ತಾಲೂಕಿನ ಹೂವಿನಕೋಣೆ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ್ದ ಕಾರಣ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆ ಸುದ್ದಿಯಾಗುತ್ತಿದ್ದಂತೆ ಗಂಭೀರವಾಗಿ ಪರಿಗಣಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ʼಯಾವ ಭಯೋತ್ಪಾದನೆಗೂ ಕಡಿಮೆ‌ ಇಲ್ಲದಂತ ಕೃತ್ಯʼ ಎಂದಿದ್ದರು. ಅಲ್ಲದೇ ಶಿವಮೊಗ್ಗ ಎಸ್ಪಿಗೆ ಕರೆ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚನೆ‌ ನೀಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅದೇಶ ಬೆನ್ನಲ್ಲೇ ಎಸ್ಪಿ ಮಿಥುನ್ ಕುಮಾರ್ ಅವರು ಪ್ರಕರಣದ ತನಿಖೆ ಕುರಿತು ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ ಒಟ್ಟು 18 ಪೊಲೀಸರನ್ನು ನಿಯೋಜನೆ ಮಾಡಿದ್ದರು.

ಶಾಲೆಯ ಬಾಲಕನೇ ಈ ಕೃತ್ಯ ನಡೆಸಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಘಟನೆ ನಡೆಯುವ 15 ದಿನಗಳ ಹಿಂದೆ ಈತನ ಸ್ನೇಹಿತ ಫಿನಾಯಿಲ್ ಹಾಕಿದ್ದನ್ನು ಗಮನಿಸಿದ ಬಾಲಕ ನೀರಿಗೆ ವಿಷ ಬೆರೆಸಿದ್ದಾನೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News