×
Ad

Shivamogga | ಹುಲಿಕಲ್ ಘಾಟಿಯಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು

Update: 2026-06-06 15:42 IST

ಶಿವಮೊಗ್ಗ : ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News