Shivamogga | ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
Update: 2026-06-13 17:46 IST
ಶಿವಮೊಗ್ಗ : ಮಹಿಳೆ ಮತ್ತು ಅವರ ಸಾಕು ನಾಯಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರವೀಂದ್ರ ನಗರದ ಮನೆಯೊಂದರಲ್ಲಿ ನಡೆದಿದೆ.
ಮೃತರನ್ನು ಪ್ರಭಾವತಿ (57) ಎಂದು ಗುರುತಿಸಲಾಗಿದೆ. ರವೀಂದ್ರ ನಗರದ 1ನೇ ಅಡ್ಡರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಕೆಲವು ದಿನದ ಹಿಂದೆ ಮಹಿಳೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ. ಇಂದು ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆಯ ಸಂಭವಿಸಿದೆ.