×
Ad

ಶಿವಮೊಗ್ಗ | ಗಂಭೀರ ಅನಾರೋಗ್ಯಕ್ಕೀಡಾಗಿದ್ದ ಯುವತಿಯನ್ನು ಮುಂಬೈಗೆ ಏರ್ ಲಿಫ್ಟ್

Update: 2025-07-26 15:49 IST

ಸಾಂದರ್ಭಿಕ ಚಿತ್ರ (source: Meta AI)

ಶಿವಮೊಗ್ಗ: ಗಂಭೀರ ಅನಾರೋಗ್ಯಕ್ಕೀಡಾಗಿದ್ದ ಯುವತಿಯೊಬ್ಬಳನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್ ಲಿಫ್ಟ್ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೆದುಳು ಜ್ವರದಿಂದ ಬಳಲುತ್ತಿದ್ದ ಮಾನ್ಯಾ(22) ಎಂಬವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಕಳುಹಿಸಿಕೊಡಲಾಯಿತು.

ಶಿವಮೊಗ್ಗದ ಗಾಂಧಿ ಬಜಾರ್ ನ ತಿಮ್ಮಪ್ಪ ಕೊಪ್ಪಲು ಗ್ರಾಮದ ನಿವಾಸಿಯಾಗಿರುವ ಮಾನ್ಯಾ ಕೆಲವು ದಿನಗಳಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಬೈಯ ಆಸ್ಪತ್ರೆಗೆ ರವಾನಿಸಲು ನಿರ್ಧರಿಸಲಾಯಿತು.

ಯುವತಿಯನ್ನು ಖಾಸಗಿ ಆಸ್ಪತ್ರೆಯಿಂದ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲು ಶಿವಮೊಗ್ಗ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಹಕಾರ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿರುವ ಖಾಸಗಿ ಆಸ್ಪತ್ರೆಯ ಐಸಿಯು ಕೇರ್ ವೈದ್ಯ ಡಾ.ರಾಕೇಶ್, ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಮಾನ್ಯಾ ಶಿವಮೊಗ್ಗಕ್ಕೆ ಆಗಮಿಸಿದ ನಂತರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಅಮೃತ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದಾಗ ಡಂಗಿ ಜ್ವರ ಬಾಧಿಸಿರುವುದು ದೃಢಪಟ್ಟಿತ್ತು. ಪ್ರಾಥಮಿಕ ಚಿಕಿತ್ಸೆಯ ಬಳಿಕ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾನ್ಯಾರಿಗೆ ಜ್ವರದ ತೀವ್ರತೆ ಹೆಚ್ಚಾಗಿ ಲಿವರ್ ಸಮಸ್ಯೆಯೂ ಇರುವುದು ಪತ್ತೆಯಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ತುರ್ತಾಗಿ ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿತ್ತು. ಈ ಕಾರಣಕ್ಕಾಗಿ ಅವರನ್ನು ಮುಂಬೈಯ ಆಸ್ಪತ್ರೆಗೆ ಸಾಗಿಸುವ ನಿರ್ಧಾರ ಕೈಗೊಳ್ಳಲಾಯಿತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News