×
Ad

ಶಿವಮೊಗ್ಗ | ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ : ಎರಡು ವರ್ಷದ ಮಗು ಮೃತ್ಯು

Update: 2025-10-27 14:38 IST

ಸಾಂದರ್ಭಿಕ ಚಿತ್ರ

ಶಿವಮೊಗ್ಗ : ಕಾರು ಢಿಕ್ಕಿ ಹೊಡೆದು ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯ ವಿರುಪಿನಕೊಪ್ಪದಲ್ಲಿ ರವಿವಾರ ನಡೆದಿರುವುದು ವರದಿಯಾಗಿದೆ.

ಷಣ್ಮುಖ ಎಂಬುವರ ಪುತ್ರ ವಿನಯ್ (2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಆಟವಾಡುವ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆಯೆಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು ಢಿಕ್ಕಿಯಿಂದ ವಿನಯ್ ತಲೆ, ಕೈಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಕೂಡಲೇ ಮಗುವನ್ನು ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News