ಶಿವಮೊಗ್ಗ | ದ್ಯಾವಿನಕೆರೆ ಗ್ರಾಮದಲ್ಲಿ ಹೃದಯಾಘಾತದಿಂದ ಬಾಣಂತಿ ಮೃತ್ಯು
Update: 2025-07-01 13:46 IST
ಶಿವಮೊಗ್ಗ : ಎದೆ ಉರಿ ಕಾಣಿಸಿಕೊಂಡ ಕೆಲವೇ ಗಂಟೆಗಳಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡಘಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ದ್ಯಾವಿನಕೆರೆ ಗ್ರಾಮದಲ್ಲಿ ನಡೆದಿದೆ.
ಮೂರುವರೆ ವರ್ಷದ ಹಿಂದೆ ಮದುವೆಯಾಗಿ ಹಾಸನಕ್ಕೆ ತೆರಳಿದ್ದ 23 ವರ್ಷದ ಹರ್ಷಿತಾ ಅವರು, ಏ.5 ರಂದು ದ್ಯಾವಿನಕೆರೆಯಲ್ಲಿರುವ ತವರು ಮನೆಗೆ ಬಂದಿದ್ದರು.
ಮೇ 24ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಹರ್ಷಿತಾಳಿಗೆ ಸೋಮವಾರ ಏಕಾಏಕಿ ಎದೆ ಉರಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.