ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Update: 2026-06-01 11:23 IST
ಶಿವಮೊಗ್ಗ: ಬಂದೂಕಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ನಡೆದಿದೆ.
ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ಭಟ್ (85) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಿಂಗಲ್ ಬ್ಯಾರಲ್ ಗನ್‌ನಿಂದ ತಾವೇ ಶೂಟ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಾಮಚಂದ್ರ ಭಟ್ ಅವರ ತಲೆ ಛಿದ್ರವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.