ಶಿವಮೊಗ್ಗ: ಗಾಂಜಾ ಸೇವನೆ; ಓರ್ವನ ವಿರುದ್ಧ ಪ್ರಕರಣ ದಾಖಲು
Update: 2025-07-29 14:27 IST
ಶಿವಮೊಗ್ಗ: ಗಾಂಜಾ ಸೇವನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವನ ವಿರುದ್ದ ಶಿವಮೊಗ್ಗ ತುಂಗಾ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಿಪ್ಪುನಗರ ಬಲಭಾಗದ 5 ನೇ ಕ್ರಾಸ್ ಬಳಿಯ ಖಾಲಿ ಜಾಗದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಕಿರಣ್ ಮೋರೆ ಎಂಬುವರು ವಿಚಾರಿಸಿದ್ದಾರೆ. ಈ ವೇಳೆ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ. ಕೂಡಲೇ ವ್ಯಕ್ತಿಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಆರೋಪಿತ ವ್ಯಕ್ತಿ ವಿರುದ್ದ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.