ಶಿವಮೊಗ್ಗ | ಆಸ್ಪತ್ರೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ!
Update: 2025-08-16 21:22 IST
ಸಾಂದರ್ಭಿಕ ಚಿತ್ರ | PC : freepik.
ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.
ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ ಸಿಕ್ಕಿದೆ. ಮಗುವಿನ ಮೃತದೇಹ ಕಂಡು ಮೆಗ್ಗಾನ್ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದಾಗ ಮಗುವಿನ ಕತ್ತು ಸೀಳಿರುವುದು ಗೊತ್ತಾಗಿದೆ.
ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು, ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇನ್ನು, ಘಟನೆ ಸಂಬಂಧ ಪೊಲೀಸರು ಮಹಿಳೆಯೊಬ್ಬರನ್ನು ವಿಚಾರಣೆಗೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.