×
Ad

ಶಿವಮೊಗ್ಗ | ಅಕ್ರಮ ಆಸ್ತಿಗಳಿಕೆ ಆರೋಪ : ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-12-16 10:55 IST

ಶಿವಮೊಗ್ಗ: ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ಬಸವನಗುಡಿಯಲ್ಲಿರುವ ರೂಪ್ಲಾ ನಾಯ್ಕ್ ಅವರ ಬಾಡಿಗೆ ಮನೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಒಟ್ಟು ಆರು ತಂಡಗಳಾಗಿ ಈ ದಾಳಿಯನ್ನು ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News