×
Ad

ಶಿವಮೊಗ್ಗ: ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸರ ದಿಢೀರ್‌ ದಾಳಿ

Update: 2024-08-28 11:34 IST

ಶಿವಮೊಗ್ಗ: ಬೆಳ್ಳಂ ಬೆಳ್ಳಿಗ್ಗೆ ಜಿಲ್ಲಾ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್‌ ದಾಳಿ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಈ ದಾಳಿ ನಡೆಸಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ 120 ಕ್ಕೂ ಹೆಚ್ಚು ಪೊಲೀಸರು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್‌ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಇತರೆ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ವರ್ಗಾಯಿಸಲಾಗುತ್ತಿದೆ. ಆರೋಪಿಗಳಾದ ಜಗದೀಶ್‌ ಮತ್ತು ಲಕ್ಷ್ಮಣನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಂಗಳೂರಿನಿಂದ ರವಾನಿಸಲಾಗಿದೆ. ಈ ಆರೋಪಿಗಳು ಬರುವ ಮುನ್ನ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News