ಶಿವಮೊಗ್ಗ |: ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿ: ರೈತ ಮೃತ್ಯು
ಸಾಂದರ್ಭಿಕ ಚಿತ್ರ (Photo credit: Gemini AI)
ಶಿವಮೊಗ್ಗ: ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ನಿವಾಸಿ ತಿಮ್ಮನಾಯ್ಕ(65) ಮೃತಪಟ್ಟವರು.
ಕಳೆದ ಬುಧವಾರ ಮಧ್ಯಾಹ್ನ ದುಮ್ಮಳ್ಳಿ ಗ್ರಾಮದಲ್ಲಿರುವ ತಮ್ಮದೇ ಹೊಲದಲ್ಲಿ ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಹೆಜ್ಜೇನು ದಾಳಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ತಿಮ್ಮನಾಯ್ಕರನ್ನು ಕುಟುಂಬಸ್ಥರು ತಕ್ಷಣವೇ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.