ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಹಿಷಿಯಲ್ಲಿ ತುಂಗಾ ನದಿಯಲ್ಲಿ ನಾಲ್ವರು ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳಾದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ನೀರಿನಲ್ಲಿ ಮುಳುಗಿದವರು ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಮದುವೆ ಸಮಾರಂಭಕ್ಕೆ ಶಿವಮೊಗ್ಗ ನಗರಕ್ಕೆ ಬಂದಿದ್ದರು. ಬಳಿಕ ಮಹಿಷಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ತುಂಗಾ ನದಿಯ ನೀರಿನ ಬಳಿ ಆಟವಾಡುತ್ತಿದ್ದ ವೇಳೆ ಒಬ್ಬರ ಹಿಂದೆ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಇಟ್ಟಮಡುವಿನ ಪವನ್, ಕತ್ರಿಗುಪ್ಪೆಯ ಕಾರ್ತಿಕ್ ಮತ್ತು ತಲಘಟ್ಟಪುರದ ನಕುಲ್ ಅವರು ಕಾನೂನು ವ್ಯಾಸಂಗ ಮಾಡುತ್ತಿದ್ದರು. ಚೇತನ್ ಅವರು ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದು, ಓರ್ವನ ಮೃತದೇಹ ಪತ್ತೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರತ್ ಪುರದಾಳ್/ವಾರ್ತಾಭಾರತಿ

contributor

ಶರತ್ ಪುರದಾಳ್ ಅವರು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗದಿಂದ ಪತ್ರಿಕೋದ್ಯಮ ವೃತ್ತಿಯನ್ನು ಪ್ರಾರಂಭಿಸಿದ್ದು ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಾಜಕೀಯ ಸೇರಿದಂತೆ ಮಾನವೀಯ ಮೌಲ್ಯಗಳ ಸುದ್ದಿಗಳು- ವಿಶೇಷ ವರದಿಗಳನ್ನು ಮಾಡುವ ಹವ್ಯಾಸ ಹೊಂದಿದ್ದಾರೆ .