×
Ad

Shivamogga: ಅಜ್ಜಿಯ ಹತ್ಯೆ ಪ್ರಕರಣ; ಆರೋಪಿ ಕಾಲಿಗೆ ಗುಂಡೇಟು

Update: 2026-07-02 08:39 IST

ಶಿವಮೊಗ್ಗ:ಬುಧವಾರ ಸಂಜೆ ಅಣ್ಣಾ ನಗರದ ಆನಂದರಾವ್ ಬಡಾವಣೆಯಲ್ಲಿ ಮೊಮ್ಮಗನೊಬ್ಬ ತನ್ನ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಸುಶೀಲಮ್ಮ (65) ಎಂಬವರು ಸಾವನ್ನಪ್ಪಿದ್ದರು, ಆರೋಪಿ ಮೊಮ್ಮಗ ಕಿಶೋರ್ (26) ಈ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ದೊಡ್ಡಪೇಟೆ ಠಾಣೆಯ ಪೊಲೀಸ್ ಠಾಣೆ ಇನ್ಸ್ ​ಸ್ಪೆಕ್ಟರ್​ ಮತ್ತು ಸಿಬ್ಬಂದಿ, ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.

ಆರೋಪಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಪೇಯಿ ಬಡಾವಣೆಯಲ್ಲಿ ಇರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆತನನ್ನು ಹಿಡಿಯಲು ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ಮಾಡಿದ್ದಾನೆ. ಕಿಶೋರ್ ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್​ಸ್ಪೆಕ್ಟರ್ ಆರೋಪಿ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಗಾಯಗೊಂಡ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ಎಸ್​ಪಿ ನಿಖಿಲ್ ಬಿ ಆಸ್ಪತ್ರೆಗೆ ಭೇಟಿಕೊಟ್ಟು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News