×
Ad

Shivamogga | ಪತಿಯ ಹತ್ಯೆ ಪ್ರಕರಣ : ಪತ್ನಿ, ಪ್ರಿಯಕರನಿಗೆ ಮರಣದಂಡನೆ

Update: 2026-05-09 23:22 IST

 ಸಾಂದರ್ಭಿಕ ಚಿತ್ರ

ಶಿವಮೊಗ್ಗ : ಪತಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮರಣದಂಡನೆ ವಿಧಿಸಿ ತೀರ್ಪು ನೀಡಿದೆ.

ಸುರಗಿತೋಪಿನ ನಿವಾಸಿ ಫ್ಲೋರಾ ನ್ಯಾನ್ಸಿ, ರಾಜಶೇಖರಯ್ಯ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಸಂಬಂಧಕ್ಕೆ ಅಡ್ಡಿ ಆಗುತ್ತಾರೆ ಎಂಬ ಕಾರಣಕ್ಕೆ 2020ರ ಜ.15ರಂದು ಮತ್ತು ಬರುವ ಔಷಧಿ ನೀಡಿ, ನಂತರ ಉಸಿರುಗಟ್ಟಿಸಿ ಪತಿ ಪ್ರಕಾಶ್ ಬಾಬು ಅವರನ್ನು ಕೊಲೆ ಮಾಡಿದ್ದರು ಎಂಬ ಆರೋಪದಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಇ.ಒ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಆರೋಪಿ

ಗಳ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.

ಫ್ಲೋರಾ ನ್ಯಾನ್ಸಿ ಮತ್ತು ರಾಜಶೇಖರಯ್ಯ ಇಬ್ಬರಿಗೂ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಆರೋಪಿಗಳಿಗೆ 14 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಿರ್ಯಾದಿದಾರರಿಗೆ 5ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News