×
Ad

ಶಿವಮೊಗ್ಗ : ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಮೃತ್ಯು

Update: 2025-11-12 09:46 IST

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ. ಅಲಿಯಾಸ್ ಸಜಿ ಬಾಬು ಮೃತಪಟ್ಟ ಕೈದಿ ಎಂದು ಗುರುತಿಸಲಾಗಿದೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಮುಂಜಾನೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಮುಂಜಾನೆ 5:40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News