ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ನ ಆಪ್ತ ಸಹಾಯಕನಿಗೆ ಸಂಬಂಧಿಸಿದ ನಾಲ್ಕು ಕಡೆ ಲೋಕಾಯುಕ್ತ ದಾಳಿ
Update: 2025-11-25 08:57 IST
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಡೀನ್ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಎಂಬುವವರಿಗೆ ಸಂಬಂಧಿಸಿದ ನಾಲ್ಕು ಕಡೆ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಸಿಮ್ಸ್ ಕಾಲೇಜಿನ ಡೀನ್ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ. ಮೆಡಿಕಲ್ ಕಾಲೇಜು ಕ್ವಾರ್ಟರ್ಸ್, ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಮನೆ, ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಸೇರಿ ಒಟ್ಟು ನಾಲ್ಕುಕಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ನಾಲ್ಕು ತಂಡ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ