ಶಿವಮೊಗ್ಗ: ಶಿಮೂಲ್ ಮೇಲೆ ಲೋಕಾಯುಕ್ತ ದಾಳಿ
Update: 2025-12-25 00:26 IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಲೋಕಾಯುಕ್ತರ ತಂಡವು ಶಿಮೂಲ್ ಕಚೇರಿಯ ಲೆಕ್ಕಪತ್ರ ವಿಭಾಗ ಮತ್ತು ಮಾರುಕಟ್ಟೆ ವಿಭಾಗಗಳ ಮೇಲೆ ಗಮನ ಕೇಂದ್ರೀಕರಿಸಿದೆ. ಕಳೆದ ಕೆಲವು ಸಮಯದಿಂದ ಈ ಎರಡೂ ವಿಭಾಗಗಳಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ ಸಕಲ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.