×
Ad

ಶಿವಮೊಗ್ಗ: ಸಾವಯವ ಕೃಷಿ ಸಹ ಸಂಶೋಧನಾ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-06-24 09:44 IST

ಶಿವಮೊಗ್ಗ : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೂರು ಕಡೆ ದಾಳಿಯಾಗಿದ್ದು, ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಶಿವಮೊಗ್ಗದ ಸಾವಯವ ಕೃಷಿ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಶಿವಮೊಗ್ಗ ನಗರದ ಪ್ರಿಯಾಂಕಾ ಲೇಔಟ್ ನಲ್ಲಿರುವ ಡಾ.ಎಸ್.ಪ್ರದೀಪ್ ಮನೆ, ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್, ಹೊಸ ನಗರದಲ್ಲೀ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಎಂ.ಎಚ್.ಮಂಜುನಾಥ್ ಚೌಧರಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News