ಶಿವಮೊಗ್ಗ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಆತ್ಮಹತ್ಯೆ
Update: 2026-07-17 12:27 IST
ಶಿವಮೊಗ್ಗ: ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಮನಗರದ ಚನ್ನಪಟ್ಟಣ ತಾಲೂಕು ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮರಿಸ್ವಾಮಿ ತನ್ನ ಪ್ಯಾಂಟ್ ಬಳಸಿ, ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಶೌಚಾಲಯ ಕ್ಲೀನಿಂಗ್ ಗೆ ಸಿಬ್ಬಂದಿ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.