×
Ad

ಶಿವಮೊಗ್ಗ : ಅಪರಿಚಿತ ವಾಹನ ಢಿಕ್ಕಿ; ಮೆಡಿಕಲ್‌ ರೆಪ್‌ ಮೃತ್ಯು

Update: 2025-07-22 10:46 IST

ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಅವರ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News