×
Ad

ಶಿವಮೊಗ್ಗ | ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

Update: 2025-06-29 12:44 IST

ಶಿವಮೊಗ್ಗ: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಹಸುವಿನ ಮಾಲಕ ನವೀನ್ ಎಂಬುವರು ಹೊಸನಗರ ಠಾಣೆಯಲ್ಲಿ ನೀಡಿದ್ದು, ‘ಎಂದಿನಂತೆ ನಮ್ಮ ದನಗಳನ್ನು ಮೇಯಲು ಬಿಟ್ಟಿದ್ದು, ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ಫೋನ್ ಕರೆ ಮಾಡಿ, ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವುದಾಗಿ ತಿಳಿಸಿದರು. ತಕ್ಷಣ ಸ್ಥಳಕ್ಕೆ ಧಾವಿಸಿ ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ದನದ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದೆ. ದನದ ಕೆಚ್ಚಲನ್ನು ಯಾರೋ ಕೊಯ್ದಿರುವ ಅನುಮಾನವಿದೆ. ನಂತರ ಗ್ರಾಮಸ್ಥರ ಸಹಾಯದಿಂದ ದನವನ್ನು ಮನೆಗೆ ಕರೆತಂದು ಪಶು ವೈದ್ಯರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಿದ್ದೇವೆ.ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News