×
Ad

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

Update: 2025-05-09 10:44 IST

ಶಿವಮೊಗ್ಗ:  ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ.

ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News