ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆ
Update: 2025-12-18 08:55 IST
ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗ್ರಾಮದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ.
ಸಾಸ್ವೆಹಳ್ಳಿ ಗ್ರಾಮದ ಕುಶ ಎಂಬವರು ತಮ್ಮ ದೊಡ್ಡಪ್ಪನ ಪುತ್ರನಿಗೆ ಆನಾರೋಗ್ಯದ ಕಾರಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹಿಂದಿರುವಾಗ ಸಮೀಪದ ಮಲ್ಲಾಪುರ ಗ್ರಾಮದ ಬಳಿ ಮಗು ಅಳುವ ಶಬ್ದ ಕೇಳಿಸಿದೆ. ಬಳಿಕ ತಮ್ಮ ಅತ್ತಿಗೆ ಸಹಾಯದೊಂದಿಗೆ ಸ್ಥಳಕ್ಕೆ ಹೋಗಿ ನೋಡಿದಾಗ 2–3 ದಿನದ ಗಂಡು ಮಗು ಪತ್ತೆಯಾಗಿದೆ.
ಸುತ್ತಮುತ್ತಲಿನ ಮನೆಗಳಲ್ಲಿ ವಿಚಾರಿಸಿದಾಗ ಆ ಮಗುವು ಯಾರಿಗೂ ಸಂಬಂಧಪಟ್ಟಿಲ್ಲ ಎಂಬುದನ್ನು ದೃಢಪಡಿಸಿಕೊಂಡ ಅವರು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.